ಮನೆ ಮನೆಯಲ್ಲಿಯೂ ಗ್ರಂಥಾಲಯ ನಿರ್ಮಾಣ ವಾಗಲಿ : ಡಾ. ಬಿ ಪ್ರಭಾಕರ ಶಿಶಿಲ
ಓದುವಿಕೆಯಿಂದ ಮಾತ್ರ ಜ್ಞಾನ ವೃದ್ಧಿಸಿಕೊಳ್ಳಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲೂ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕನಿಷ್ಠ ಒಂದು ಪುಸ್ತಕವಾದರೂ ಓದುವ ಕೆಲಸವಾಗಬೇಕು ಎಂದು ಹಿರಿಯ ಸಾಹಿತಿ, ನಿವೃತ್ತ ಪ್ರಾoಶುಪಾಲ ಡಾ| ಪ್ರಭಾಕರ ಶಿಶಿಲ ಹೇಳಿದರು.

ಅವರು ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ನ್ನು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ಉದ್ಘಾಟಿಸಿ ಮಾತನಾಡಿದರು.















ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕಾಂತರಾಜು ಸಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಶುಭಹಾರೈಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮುಡಾಯಿತೋಟ, ಸದಸ್ಯೆ ಜಯಶ್ರೀ ಉಪಸ್ಥಿತರಿದ್ದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಪ್ರಸ್ತಾವಿಸಿದರು. ಜ್ಞಾನದೀಪ ಶಿಕ್ಷಣ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿ, ಗ್ರಾಮ ಗ್ರಂಥಾಲಯ ಸಲಹಾ ಸಮಿತಿ ಸದಸ್ಯ ಸಂಜಯ್ ನೆಟ್ಟಾರು ವಂದಿಸಿದರು. ಶಿಕ್ಷಕ ಯೋಗೀಶ್ ತಳೂರು ಕಾರ್ಯಕ್ರಮ ನಿರೂಪಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶಶಿಕಲಾ ಸಹಕರಿಸಿದರು.










