ಕಲ್ಮಡ್ಕ: ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ದಿನಸಿ ಸಾಮಗ್ರಿ ವಿತರಣೆ

0

ಡಾ. ಡಿ.ವೀರೇಂದ್ರ ಹೆಗ್ಗಡೆ ಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ನ.25 ರಂದು ಕಲ್ಮಡ್ಕ ಗ್ರಾಮದ ಕಾಚಿಲ ಎಂಬಲ್ಲಿ ವಾಸವಾಗಿರುವ ಮದನ ಮೂಲ್ಯ ಎಂಬವರ ಕುಟುಂಬಕ್ಕೆ
ಸುಮಾರು ಒಂದು ತಿಂಗಳಿಗೆ ಬೇಕಾಗುವಷ್ಟು ದಿನಸಿ ಸಾಮಗ್ರಿಯನ್ನು ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಂತಿಕಲ್ಲು ಇದರ ವತಿಯಿಂದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮೋಹಿನಿ ಲತೇಶ್ , ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾದಿಕಾರಿ ಪ್ರಶಾಂತ್ ಜೆ, ಶ್ರೀರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಭಟ್ ತಿಪ್ಪನಕಜೆ, ಕಾರ್ಯದರ್ಶಿ ಸಾಯಿ ಗಿರಿಧರ್, ವಲಯ ಅಧ್ಯಕ್ಷ ವಸಂತ ಕಕ್ಕಯ್ಯಕೋಡಿ, ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ ಶೆಟ್ಟಿ, ನಿಂತಿ ಕಲ್ಲು ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಶ್ರೀಮತಿ ಲೀಲಾವತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.