ಸುಳ್ಯ ರೋಟರಿ ಕ್ಲಬ್, ಅಮರ ಕ್ರೀಡಾ ಮತ್ತು ಕಲಾ ಸಂಘ ಬಡ್ಡಡ್ಕ ಇದರ ಬೆಳ್ಳಿ ಹಬ್ಬದ ಅಂಗವಾಗಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಮತ್ತು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಇದರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ ನ. 30 ರಂದು ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಲಿರುವುದು.















ಈ ಶಿಬಿರದಲ್ಲಿ ರಕ್ತದಾನ ಮಾಡಲು ಇಚ್ಚಿಸುವರು ಮುಂಚಿತವಾಗಿ ನೋಂದಾಯಿಸಿಕೊಂಡು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಅವಕಾಶವಿರುವುದು.
ಶಿಬಿರದಲ್ಲಿ ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ಮತ್ತು ಕನ್ನಡಕದ ಅವಶ್ಯಕತೆ ಇರುವ ವರಿಗೆ ಸುಳ್ಯ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ಕನ್ನಡಕಒದಗಿಸಿಕೊಡಲಾಗುವುದು ಎಂದು ಸಂಘಟಕರು ತಿಳಿಸಿದರು.










