ದೊಡ್ಡೇರಿ : ಹೊಲಿಗೆ ತರಬೇತಿ ಉದ್ಘಾಟನೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಅಜ್ಜಾವರ ವಲಯದ ದೊಡ್ಡೇರಿ ಕಾರ್ಯಕ್ಷೇತ್ರದ “ಅಮೃತ ” ಮಹಿಳಾ ಜ್ಞಾನ ವಿಕಾಸ ಕೇಂದ್ರದಡಿಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ನ. 25 ರಂದು ಹೊಲಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ದೀಪ ಕಾರ್ಯಕ್ರಮ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆ ಯನ್ನು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ್ ದೊಡ್ಡೇರಿ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷರಾದ ಲೋಕನಾಥ
ಅಮೆಚೂರು, ತಾಲೂಕು ಯೋಜನಾಧಿಕಾರಿ ಮಾಧವ ಗೌಡ,
ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಲಕ್ಷ್ಮಿ , ಕಾಂತಮಂಗಲ ಒಕ್ಕೂಟದ ಅಧ್ಯಕ್ಷರಾದ ಸತೀಶ್, ಮುಳ್ಯ ಒಕ್ಕೂಟದ ಅಧ್ಯಕ್ಷರಾದ ರಮೇಶ್, ಜ್ಞಾನ ವಿಕಾಸ ಸಂಯೋಜಕಿ ಶ್ರೀಮತಿ ಹೇಮಾವತಿ, ವಿಶ್ವನಾಥ ಅತ್ಯಡ್ಕ ರವರು ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ
ಒಕ್ಕೂಟದ ಪಧಾಧಿಕಾರಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು,
ಹೊಲಿಗೆ ತರಬೇತಿ ಪಡೆಯುವ ಸದಸ್ಯರು ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಉಷಾಜ್ಯೋತಿ ಸ್ವಾಗತಿಸಿದರು.
ಶ್ರೀಮತಿ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು.
ಶ್ರೀಮತಿ ಉಮಾವತಿ ವಂದಿಸಿದರು.