ಗ್ರಂಥಾಲಯಗಳು ಜ್ಞಾನ ಕೇಂದ್ರಗಳಾಗಲಿ – ಬಿ.ವಿ ಸೂರ್ಯನಾರಾಯಣ
ಓದಿನಿಂದ ಮಾತ್ರ ಮನುಷ್ಯ ಪರಿಪೂರ್ಣನಾಗುತ್ತಾನೆ. ಪ್ರತಿಯೊಂದು ಗ್ರಂಥಾಲಯಗಳು ಜ್ಞಾನ ಪಸರಿಸುವ ಕೇಂದ್ರಗಳಾಗಲಿ ಎಂದು ವಿಶ್ರಾಂತ ಪ್ರಾoಶುಪಾಲ ಬಿ.ವಿ ಸೂರ್ಯನಾರಾಯಣ ಹೇಳಿದರು. ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ರ ಸಮಾರೋಪ ಸಮಾರಂಭ ದಲ್ಲಿ ಸಮಾರೋಪ ಭಾಷಣ ಮಾಡಿದರು.















ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾoಶುಪಾಲ ಜನಾರ್ಧನ ಕೆ.ಎನ್, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಹರ್ಷ ಜೋಗಿಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕು. ತನುಷಾ ಕೆ.ಬಿ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಕನ್ನಡದಲ್ಲಿ,ಕು. ಸ್ವಾತಿ ಇಂಗ್ಲಿಷ್ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಇಂಗ್ಲಿಷ್ ನಲ್ಲಿ, ಕು. ಮಾನ್ವಿ ಎ.ಪಿ ತುಳು ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ತುಳು ಬಾಷೆಯಲ್ಲಿ ಉಪನ್ಯಾಸ ನೀಡಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯ ಶಿಕ್ಷಕಿ ಮಿಯ್ಯಾಗೆ ಸ್ವಾಗತಿಸಿ. ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯಯೊಪಾಧ್ಯಾಯ ಮಾಯಿಲಪ್ಪ ಜಿ ವಂದಿಸಿದರು. ನಿವೃತ್ತ ಶಿಕ್ಷಕ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಗ್ರಂಥಾಲಯ ಪಿತಾಮಹ ರಂಗನಾಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.










