ಆತ್ಮಿಕಾ ಜಯನಗರ ತಂಡ ಉಡುಪಿ ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

0

ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇಲ್ಲಿಯ ಪತ್ರಿಕೋದ್ಯಮ ವಿಭಾಗದ ಅಂತಿಮ ವಿಭಾಗದ ವಿದ್ಯಾರ್ಥಿ ಆತ್ಮಿಕಾ.ಜಿ ಜಯನಗರ ಅವರ ತಂಡಕ್ಕೆ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಹುತಾತ್ಮರ ಸ್ಮಾರಕ ಅಜ್ಜರಕಾಡು ಇಲ್ಲಿ ನಡೆದ ವಿಶ್ವ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದರು.

ಸುಳ್ಯ ತಾಲ್ಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ಹೊಸಗದ್ದೆ ನಿವಾಸಿ ಗುರುವ ಮತ್ತು ದಿ. ಗಿರಿಜಾ ದಂಪತಿಗಳ ಪುತ್ರಿ ಕು. ಆತ್ಮಿಕಾ ಜಿ. ಜಯನಗರ ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿ ಪ್ರಸ್ತುತ ಉಡುಪಿಯ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿದ್ದಾರೆ.

ಇವರ ತಂಡದಲ್ಲಿ ಹರ್ಷದಾ, ಸ್ಮಿತಾ, ಅನ್ನಪೂರ್ಣ, ಸುಧಾ, ಮಲ್ಲೇಶ್ವರಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.