ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನ ಅಡ್ಕರ್ ನಲ್ಲಿ ವಿಶೇಷ ಪೂಜೆ

0

ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನ ಅಡ್ಕರ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸರ್ಕಾರಿ ಹಿರಿಯ ಪ್ರಾಥಮಿಕ ಸೋಣಂಗೆರಿ ಶಾಲಾ ವಿದ್ಯಾರ್ಥಿಗಳಿಗೆ ಡಿಕ್ಷನರಿ ವಿತರಣೆ, ದೊಡ್ಡತೋಟ ಪ್ರಾಥಮಿಕ ಶಾಲೆಗೆ ಚಯರ್ ವಿತರಣೆ, ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿ, ಶಾರದಾಂಬ ಭಜನಾ ಮಂದಿರ ಬೆಳ್ಳಿಪ್ಪಾಡಿ ವಿಶೇಷ ಪ್ರಾರ್ಥನೆ ಹಾಗೆ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಉಳ್ಳಾಕುಲು ಯಾನೆ ನಾಯರ್ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹಾಗೂ ಜಾಲ್ಸುರ್ ಪಯಸ್ವಿನಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಪ್ರಾರಂಭಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯದ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ SDMC ಅಧ್ಯಕ್ಷರು ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಲಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಯವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.