ಸುಳ್ಯ ತಾಲೂಕು 28 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.















ನ.28ರಂದು ಸುಳ್ಯಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
28ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 30 ರಂದು ಕುಕ್ಕುಜಡ್ಕದಲ್ಲಿ ನಡೆಯಲಿದೆ.










