ಸಂಪಾಜೆ ಗ್ರಾಮದ ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಐ. ಸಿ. ಡಿ. ಎಸ್. ಯೋಜನೆಯಡಿ ಎಲ್. ಕೆ. ಜಿ., ಯು. ಕೆ. ಜಿ. ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುಸ್ತಕವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಸಂಪಾಜೆ ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ವಿತರಿಸಿದರು. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರು ಮೈಸೂರಿನಲ್ಲಿ 50 ವರ್ಷಗಳ ಹಿಂದೆ ಆರಂಬಿಸಿದ ಐ. ಸಿ. ಡಿ. ಎಸ್. ಯೋಜನೆಯ ಸುವರ್ಣಮಹೋತ್ಸವ ಅಂಗವಾಗಿ ಸುಳ್ಯ ತಾಲೂಕಿನ 169 ಅಂಗನವಾಡಿ ಪೈಕಿ 13 ಅಂಗನವಾಡಿ ಈ ಯೋಜನೆಗೆ ಆಯ್ಕೆ ಮಾಡಲಾಗಿದ್ದು ಸಂಪಾಜೆ ಗ್ರಾಮದ ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಿತು.















ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸುಂದರಿ ಮುಂಡಡ್ಕ, ಬಾಲವಿಕಾಶ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಮಿರಾ, ಅಂಗನವಾಡಿ ಕಾರ್ಯಕರ್ತೆ ಹರ್ಷಿತಾ ಆಶಾ, ಕಾರ್ಯಕರ್ತೆ ಸವಿತಾ ರೈ, ಬಾಲವಿಕಾಸ ಸಮಿತಿಯ ರತ್ನಾವತಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



