ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

0

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಶ್ರೀ ಕಾಳಿಕಾ ಪ್ರಸಾದ್ ಮುಂಡೋಡಿ ಯವರು ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯನಿ ಮತ್ತು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಶ್ರೀಮತಿ ತಂಗಮ್ಮ ಕೆ ಎಸ್ ರವರು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಉಡುಗೆ ತೊಡುಗೆಯನ್ನು ಧರಿಸಿ ಕಾರ್ಯಕ್ರಮಕ್ಕೆ ಕಳೆಯನ್ನು ನೀಡಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ಮತ್ತು ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ ಪಿ ರವರು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಮತ್ತು ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಗಾಯತ್ರಿ ರವರು ನೆರವೇರಿಸಿದರು. ಪಿ ಯು ಸಿ ವಿಭಾಗದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಭೌತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಕೃತಿ ಪಿ ಎಸ್ ರವರು ನೆರವೇರಿಸಿದರು.

ಇತಿಹಾಸ ಉಪನ್ಯಾಸಕರಾದ ಶ್ರೀ ಪ್ರಸನ್ನ ಎನ್. ಎಚ್ ಸ್ವಾಗತಿಸಿ, ಸಮಾಜ ವಿಜ್ಞಾನ ಸಹ ಶಿಕ್ಷಕಿ ಶ್ರೀಮತಿ ಸುನಿತಾ ರವರು ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸ್ವಾತಿ ಎಂ ಮತ್ತು ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪ್ತಿ ರವರು ಕಾರ್ಯಕ್ರಮ ನಿರೂಪಿಸಿದರು.