ಹುಬ್ಬಳ್ಳಿ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನ

0

ನವೆಂಬರ್ 30 ರಂದು ಹುಬ್ಬಳ್ಳಿಯಲ್ಲಿ ನಡೆದ ಮ್ಯಾರಥಾನ್ ನಲ್ಲಿ 10 ಕಿ.ಮೀ ವಿಭಾಗದಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನದೊಂದಿಗೆ 12,000/ ನಗದು ಬಹುಮಾನ ದೊರಕಿದೆ. ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ. ಮಂಗಳೂರಿನ ನೀರು ಮಾರ್ಗದಲ್ಲಿರುವ ಕೇಂಬ್ರಿಡ್ಜ್ ಸ್ಕೂಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರು.