ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ ಎಂ.ಬಿ.ಎ. ವಿಭಾಗದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಡಿ. ೨ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ಕೆ.ಬಿ. ಕೀರ್ತನ್ ಕುಮಾರ್ Joint G.M. Pradeep Phosohates Ltd. ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಅವಕಾಶಗಳ ಬಗ್ಗೆ ಹಾಗೂ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿಯವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶಿಸ್ತು ಹಾಗು ಸಂಯಮವನ್ನು ಜೀವನದಲ್ಲಿ ಅಳವಡಿಸುವಂತೆ ಮಾರ್ಗದರ್ಶನವನ್ನು ನೀಡಿದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಂ.ಬಿ.ಎ. ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ. ಮತ್ತು ವಿದ್ಯಾರ್ಥಿ ಸಲಹೆಗಾರರಾದ ಪ್ರೊ. ಮನೋಹರ ಎ.ಎನ್., ಕೋಶಾಧಿಕಾರಿ ರವೀಶ ಪಿ., ನೂತನ ಉಪಾಧ್ಯಕ್ಷೆ ರಿಶಿಕಾ ಎಂ.ಜಿ. ಮತ್ತು ಕಾರ್ಯದರ್ಶಿ ತೌಶಿರಾ ಜಿ.ಎಲ್.ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಿಶಿಕಾ ಎಂ.ಜಿ. ಸ್ವಾಗತಿಸಿ, ಪೂಜಾ ವಂದಿಸಿದರು. ಭೂಮಿಕಾ ಹಾಗೂ ಸಿಂಚನಾ ಸಿ.ಸಿ. ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಯಲ್ಲಿ ಮೂಡಿಬಂದಿತು.
Home ಪ್ರಚಲಿತ ಸುದ್ದಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿ ಸಂಘ (MANASA)ಪದಾಧಿಕಾರಿಗಳ ಪದಗ್ರಹಣ ಮತ್ತು ನೂತನ ವಿದ್ಯಾರ್ಥಿಗಳ...










