














ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ. ವಿದ್ಯಾರ್ಥಿಗಳಿಂದ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, ಪ್ರಾಜೆಕ್ಟ್ ಎಕ್ಸ್ಪೋ-೨೦೨೫-೨೬ ಡಿ. ೫ರಂದು ನಡೆಯಿತು. ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಐ.ಟಿ.ಐ. ಪ್ರಾಂಶುಪಾಲ ದಿನೇಶ್ ಮಡ್ತಿಲ ಅವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಜೆಕ್ಟ್ ತಯಾರುಮಾಡುವುದರಿಂದ ಕೌಶಲ್ಯವು ಉತ್ತೇಜನಗೊಳ್ಳುತ್ತದೆ ಎಂದು ಹೇಳಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಮಾತಾನಾಡಿ, ಪ್ರಾಜೆಕ್ಟ್ ಎಕ್ಸ್ಪೋ ಪ್ರದರ್ಶನಕ್ಕೆ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಅಲ್ಲದೆ ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಪ್ರೊ. ರಾಘವೇಂದ್ರ ಬಿ. ಕಾಮತ್ ಕಾರ್ಯಕ್ರಮಕ್ಕೆ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಲೇಖ ಬಿ.ಎಂ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊ. ಭವ್ಯ ಪಿ.ಎಸ್. ನಡೆಸಿಕೊಟ್ಟರು. ಕಾಲೇಜಿನ ನಾಲ್ಕು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು ೧೧೮ಕ್ಕಿಂತಲೂ ಅಧಿಕ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡವು. ಉಪಪ್ರಾಂಶುಪಾಲರು ಮತ್ತು ಗಣಿತ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಡೀನ್ಗಳು, ವಿದ್ಯಾರ್ಥಿ ಕ್ಷೇಮಾಧಿಕಾರಿ, ಕಾಲೇಜಿನ ಆಡಳಿತಾಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.










