ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪೋಕ್ಸ್ ಕಾಯಿದೆ ಬಗ್ಗೆ ಮಾಹಿತಿ ಕಾರ್ಯಗಾರ

0

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ಯಲ್ಲಿ ಡಾ.ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಪೋಕ್ಸ್ ಕಾಯಿದೆ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಡಿ.4 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸಂತೋಷ್ ರವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಅ ಬಳಿಕ ವಿದ್ಯಾರ್ಥಿಗಳಿಗೆ ಪೋಕ್ಸ್, ಕಾಯಿದೆ, ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ, ಬೆಳ್ಳಾರೆ ಡಾ. ಶಿವರಾಮ ಕಾರಂತ ಕಾಲೇಜ್ ನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಗಿರೀಶ್, ಮುಖ್ಯ ಶಿಕ್ಷಕಿ ಶ್ರೀಮತಿ ಜಯಲತ ಕೆ. ಆರ್ ರವರು ಉಪಸ್ಥಿತರಿದ್ದರು.

ಶಾಲಾ ಬೋಧಕ, ಬೋಧಕೇತರು, ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಡಾ. ಕೆ. ಶಿವರಾಮ ಕಾರಂತ ಕಾಲೇಜ್ ಬೆಳ್ಳಾರೆಯ ಸಮಾಜ ಕಾರ್ಯವಿಭಾಗದ ವಿದ್ಯಾರ್ಥಿಗಳು ನಿರ್ವಹಿಸಿದರು.