
ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ. 14 ಮತ್ತು 15 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.















ಡಿ. ೧೪ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ತೋರಣ ಮುಹೂರ್ತ, ೧೧.೩೦ರಿಂದ ಚಂಡಿಕಾಯಾಗದ ಪೂರ್ಣಾಹುತಿ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ ೭ಕ್ಕೆ ಶ್ರೀ ದೇವಿಗೆ ದೊಡ್ಡರಂಗಪೂಜೆ ಹಾಗೂ ಮಹಾಪೂಜೆ, ರಾತ್ರಿ ೮.೩೦ರಿಂದ ಶ್ರೀ ದಏವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ.
ಡಿ. ೧೫ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶಪೂಜೆ, ೯ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ೧೨ರಿಂದ ಬಟ್ಟಲುಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ ೧೨.೩೦ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪ ಗಂಟೆಗೆ ಕೇರ್ಪಡ ಗೌಡ ಮನೆತನದ ಭಂಡಾರ ಮನೆಯಿಂದ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಭಂಡಾಡ ದೇವಸ್ಥಾನಕ್ಕೆ ಆಗಮಿಸಿ, ನೇಮೋತ್ಸವ ನಡೆಯಲಿದೆ. ರಾತ್ರಿ ೮ ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.









