
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ನ ಸುಳ್ಯ ತಾಲೂಕು ಘಟಕದ 2025-26ನೇ ಸಾಲಿನ ಅಧ್ಯಕ್ಷರಾಗಿ ಯಶ್ವಿತ್ ಕಾಳಂಮನೆ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿ. 11 ರಂದು ಪೂ. 10.30 ಕ್ಕೆ ಸುಳ್ಯದ ಶ್ರೀಹರಿ ಬಿಲ್ಡಿಂಗ್ನಲ್ಲಿರುವ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಲಿದೆ.








ಕೆಜೆಯು ತಾಲೂಕು ಘಟಕದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ ಭಾಗವಹಿಸಲಿದ್ದಾರೆ.
ಕೆಜೆಯು ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಸುಳ್ಯ ಪ್ರೆಸ್ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ರಂಗಮಯೂರಿ ಕಲಾಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ಗೌರವ ಉಪಸ್ಥಿತರಿರುವರು.










