ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಭಾಗವಾಗಿ ಚೊಕ್ಕಾಡಿ ಅಂಗನವಾಡಿಯ ಹೊರಾಂಗಣದಲ್ಲಿ ಇತ್ತೀಚೆಗೆ ಸ್ವಚ್ಛತಾ ಕಾರ್ಯ ನಡೆಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಪುಟಾಣಿ ಮಕ್ಕಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸುವ ಜಾಗೃತಿ ಕಾರ್ಯಕ್ರಮವನ್ನೂ ಆಯೋಜಿಸಲಾಯಿತು. “ಕಸವನ್ನು ಎಲ್ಲೆಂದರಲ್ಲಿ ಹಾಕದೇ, ಕಸದ ಬುಟ್ಟಿಗಳಲ್ಲೇ ಹಾಕಬೇಕು” ಎಂಬ ಸಂದೇಶವನ್ನು ಊರಿನ ಹಿರಿಯರಾದ ಶ್ರೀಮತಿ ಪುಷ್ಪಾವತಿ ಅವರು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.









ಮಯೂರಿ ಯುವತಿ ಮಂಡಲ ಚೊಕ್ಕಾಡಿಯ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕಾರ್ಯಗತ ಅಚಲ, ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉತ್ಸಾಹಭರಿತವಾಗಿ ಪಾಲ್ಗೊಂಡು, ಪರಿಸರ ಒಶುದ್ಧೀಕರಣದ ಅಗತ್ಯತೆ ಹಾಗೂ ಜವಾಬ್ದಾರಿಯ ಬಗ್ಗೆ ಮಕ್ಕಳಿಗೆ ಸಂದೇಶ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು










