ಸುಳ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಶುಚಿ- 2025’ ಆರೋಗ್ಯ ಅರಿವು ಕಾರ್ಯಕ್ರಮ

0

ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲ್ ಬೈಲ್, ಸುಳ್ಯ ಇವರ ಸಹಯೋಗದೊಂದಿಗೆ ಆಯೋಜಿಸಲಾದ ಶುಚಿ ೨೦೨೫ ಆರೋಗ್ಯ ಅರಿವು ಕಾರ್ಯಕ್ರಮವು ಡಿ. 13 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲ್ ಬೈಲ್, ಸುಳ್ಯ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಎನ್.ಆರ್. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ. ಶಾಲಿನಿ ವಿ.ಎಲ್., ಸ್ತ್ರೀರೋಗ ತಜ್ಞರು, ತಾಲೂಕು ಆಸ್ಪತ್ರೆ ಸುಳ್ಯ ಇವರು ವೈಯಕ್ತಿಕ ಶುಚಿ, ಮಹಿಳಾ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯುಕ್ತ ಅರಿವು ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿ ನಳಿಯಾರು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಶುಚಿ ಮತ್ತು ಆರೋಗ್ಯ ಜಾಗೃತಿಯ ಮಹತ್ವವನ್ನು ವಿವರಿಸಿ, ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಅಗತ್ಯವೆಂದು ತಿಳಿಸಿದರು.

ಮಯೂರಿ ಯುವತಿ ಮಂಡಲ ಚೊಕ್ಕಾಡಿಯ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ರೆಡ್ ಕ್ರಾಸ್‌ನ ಅಧಿಕಾರಿ ಭಾಸ್ಕರ್‌ರವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಕು. ಸ್ಪೂರ್ತಿ ಸ್ವಾಗತಿಸಿ, ಕು. ಅಕ್ಷತಾ ವಂದಿಸಿದರು. ಕು. ವಕ್ಷಿತಾ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿದರು. ಮಯೂರಿ ಯುವತಿ ಮಂಡಲದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಲೇಜಿನ ಪ್ರೇರಣಾ ಸಂಯೋಜಕರಾದ ರಾಮಕೃಷ್ಣ ಕೆ.ಎಸ್. ಕಾರ್ಯಕ್ರಮವನ್ನು ಆಯೋಜಿಸಿದ್ದರು.