








ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಚಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಐವತ್ತೊಕ್ಲು ಗ್ರಾಮದ ಜಾದೂ ಹಾಗೂ ಜನಪದ ಕಲಾವಿದ ರವಿ ಚಲ್ಲಕೋಡಿ ಇವರು ಹ್ಯಾಮರ್ ಎಸೆತದಲ್ಲಿ ಚಿನ್ನದ ಪದಕ, ಶಾಟ್ ಪುಟ್ ಹಾಗೂ ಚಕ್ರ ಎಸೆತದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ. ಇವರು ಪಾಂಡಿಗದ್ದೆ ಕಿರಿಯ ಪ್ರಾಥಮಿಕ ಶಾಲೆ ಮತ್ತು ಪಂಜದ ಸರಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಸುತ್ತಮುತ್ತಲಿನ ಪರಿಸರದ ಮಕ್ಕಳಿಗೆ ಜನಪದ ಕಲೆ ಮತ್ತು ಕ್ರೀಡಾ ತರಬೇತಿ ನೀಡುತ್ತಿದ್ದಾರೆ. ಅವರು ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



