ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ
ಯುವಜನ ಸಂಯುಕ್ತ ಮಂಡಳಿ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ, ಡಿ.8ರಂದು ಚೊಕ್ಕಾಡಿ ಪರಿಸರದ ಕೂಲಿ ಕಾರ್ಮಿಕರಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.










ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ, ಆರೋಗ್ಯಕರ ಮತ್ತು ಸ್ವಚ್ಛ ಸಮಾಜ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು. ಸ್ವಚ್ಛತಾ ಜಾಗೃತಿ ಸಂದೇಶವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯೆಯರು ಸಕ್ರಿಯವಾಗಿ ಭಾಗವಹಿಸಿದ್ದರು.










