ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು














ಸುಳ್ಯ ಸಮೀಪದ ಅರಂಬೂರಿನಲ್ಲಿ ಬೈಕ್ ಅಪಘಾತವಾಗಿ ಸವಾರ ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.
ಜ..5ರಂದು ಮಧ್ಯಾಹ್ನ ಈ ಅಪಘಾತ ನಡೆದಿದೆ.
ಸಲ್ಮಾನ್ ಎಂಬವರು ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತಿದ್ದಾಗ ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟರು. ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.







