ಪೈಚಾರು: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಕಾರು

0

ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

ಪೈಚಾರು ಬಳಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಪ್ರಯಾಣಕರು ಮತ್ತು ಆಟೋ ಚಾಲಕ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಜ. ೧೩ ರಂದು ನಡೆದಿದೆ.

ಆಟೋ ರಿಕ್ಷಾ ಪೈಚಾರು ನಿಂದ ಸುಳ್ಯ ಕಡೆಗೆ ಬರುತ್ತಿದ್ದು ಇದೇ ವೇಳೆ ಮೈಸೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರಿನ ಮುಂಭಾಗದ ಟಯರ್ ಹೊಡೆದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆಟೋ ರಿಕ್ಷಾದ ಟಯರ್ ಹಾಗೂ ರಿಕ್ಷಾಕ್ಕೂ ಹಾನಿಯಾಗಿದೆ.
ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.