ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಕೊರಗ ಜಿಲ್ಲಾ ಸಂಘ ಇವುಗಳ ಸಹಯೋಗದೊಂದಿಗೆ ಮಾ.01 ಆದಿತ್ಯವಾರದಂದು ಮಡಪ್ಪಾಡಿ ಸೊಸೈಟಿ ವಠಾರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ “ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.