ಸಂಧ್ಯಾರಶ್ಮಿ ಸಾಹಿತ್ಯ ಸಂಘ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಡಾ। ವೀಣಾ ಎನ್.ರವರ ಸಾಹಿತ್ಯ ಸಂವಾದ ಕಾರ್ಯಕ್ರಮ ಮಾ. 24 ರಂದು ಸುಳ್ಯದ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು.














ಸಂಧ್ಯಾರಶ್ಮಿ ಸಾಹಿತ್ಯ ಸಂಘ ಅಧ್ಯಕ್ಷ ರಾಮಚಂದ್ರ ಪಲ್ಲತ್ತಡ್ಕ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ಸಂಜೀವ ಕುದುಪಜೆ ಭಾಗವಹಿಸಿ ಡಾ. ವೀಣಾರವರ ಸಾಹಿತ್ಯದ ಬಗ್ಗೆ ಮಾತನಾಡಿದರು.
ಸಂಧ್ಯಾರಶ್ಮಿ ಸಾಹಿತ್ಯ ಸಂಘದ ಉಪಾಧ್ಯಕ್ಷ ಕೆ.ಆರ್ ಗೋಪಾಲಕೃಷ್ಣ ಡಾ। ವೀಣಾ ವಿರಚಿತ ಗೀತ ಗಾಯನ ನಡೆಸಿಕೊಟ್ಟರು.
ಸಾಹಿತಿ ಡಾ। ವೀಣಾ ಎನ್., ಸುಳ್ಯ ತಾಲೂಕು ಪಿಂಚಣಿದಾರರ ಸಂಘ ಅಧ್ಯಕ್ಷ ಡಾ। ರಂಗಯ್ಯ, ಕ.ಸಾ.ಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ.ಸಾ.ಪ ಸುಳ್ಯ ಹೋಬಳಿ ಘಟಕ ಕಾರ್ಯದರ್ಶಿ ಅಬ್ದುಲ್ಲ ಅರಂತೋಡು ಕಾರ್ಯಕ್ರಮ ನಿರೂಪಿಸಿದರು. ಫಾಲಚಂದ್ರ ವೈ. ವಿ. ಸ್ವಾಗತಿಸಿದರು.







