ತಲೆಮರೆಸಿಕೊಂಡಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ ಸುಳ್ಯ ಪೊಲೀಸರು

0

ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಪತ್ನಿಗೆ ಜೀವನಾಂಶ ನೀಡದೆ ಇರುವ ಬಗ್ಗೆ ದಾಖಲಾಗಿರುವ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದು ಆತನನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಗೆ ಸುಳ್ಯ ನ್ಯಾಯಾಲಯದಿಂದ 2024 ರಲ್ಲಿನ FLW ವಾರೆಂಟ್ ಅನ್ನು ಹೊರಡಿಸಲಾಗಿತ್ತು.

ಆರೋಪಿ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ಸುರೇಂದ್ರನ್ ಎಂಬಾತನಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಕಳೆದ ಒಂದು ವರ್ಷದಿಂದ ತಲೆಮರಸಿಕೊಂಡಿದ್ದ. ಇದೀಗ ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಮೇಶ್ ರವರು ಮಾರ್ಚ್ 25 ರಂದು ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ಕಲ್ಲೋಟಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.