ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿಯವರು ಬರೆದ ‘ಇಮಾಮ್ ಸಾಹೇಬರ ಕುದುರೆ’ ಕೃತಿ ಪ್ರಶಸ್ತಿಗೆ ಭಾಜನವಾಗಿದೆ.















2024 ನೇ ಸಾಲಿನ ಪ್ರಶಸ್ತಿ ಇದಾಗಿದ್ದು ಒಟ್ಟು 17 ಸಾಹಿತಿಗಳ ಸಾಹಿತ್ಯ ಕೃತಿಯನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕವನ್ನೊಳಗೊಂಡಿದೆ.
ವೈ.ಎಸ್.ಹರಗಿಯವರು ಮೈಸೂರಿನವರು. ಒಂದೂವರೆ ತಿಂಗಳ ಹಿಂದೆ ಸುಳ್ಯಕ್ಕೆ ಶಿಕ್ಷಣಾಧಿಕಾರಿಯಾಗಿ ಬಂದಿದ್ದಾರೆ.
ಇವರು 25ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದು, ಇವರ ‘ಉರಿವ ಜಲ’ ಕೃತಿಗೆ 2014ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚದುರಂಗ ದತ್ತಿನಿಧಿ ಪ್ರಶಸ್ತಿ ಲಭಿಸಿತ್ತು.







