ಸುಳ್ಯ : ಅಪಘಾತ ವಲಯಕ್ಕೆ ಅಡಿಷನಲ್ ಎಸ್ಪಿ ಭೇಟಿ, ಪರಿಶೀಲನೆ

0

ಸುಳ್ಯದಲ್ಲಿ ಇತ್ತೀಚೆಗೆ ನಿರಂತರವಾಗಿ ಅಪಘಾತ ಸಂಭವಿಸುತ್ತಿರುವ ಮಾಣಿ ಮೈಸೂರು ಹೆದ್ದಾರಿ ಬೋಳುಬೈಲು ಪ್ರದೇಶಕ್ಕೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಭೂಮರೆಡ್ಡಿ ಯವರು ಮಾ 25 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ಕೋಲ್ಚಾರಿನಲ್ಲಿ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಪ್ರದೇಶಕ್ಕೂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಯೊಂದಿಗೆ ಮಾತನಾಡಿದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿ ಅಪಘಾತ ವಲಯಗಳ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದಿರುತ್ತೇನೆ.ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೂ ಅಲ್ಲದೆ ಸಂಬಂಧಪಟ್ಟ ಇಲಾಖೆಗೆ ರಸ್ತೆಯ ಬಗ್ಗೆ ಮಾಹಿತಿ ನೀಡಿ ಸೂಕ್ತ ಕ್ರಮಗಳನ್ನು ಅನುಸರಿಸುವ ಬಗ್ಗೆ ಸೂಚನೆ ನೀಡಲಿದ್ದೇವೆ ಎಂದು ತಿಳಿಸಿದರು.
ಅಲ್ಲದೆ ವಾಹನ ಸವಾರರು ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತು ದ್ವಿಚಕ್ರ ವಾಹನ ಸವಾರರು ಅತಿ ಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸಿ ಅಪಘಾತಗಳಿಂದ ರಕ್ಷಣೆ ಹೊಂದಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷರಾದ ಸಂತೋಷ್ ಬಿ ಪಿ ರವರು ಉಪಸ್ಥಿತರಿದ್ದರು.