













ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 24 ರಂದು ಒಂದು ದಿನದ ರಾಜ್ಯಮಟ್ಟದ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ – “ಎಕ್ಸಲೆಂನ್ಸಿಯ 2K26” ಯನ್ನು ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಾಜ ಸೇವಾ ರತ್ನ ಪ್ರಶಸ್ತಿ ವಿಜೇತರಾದ ಸುಬ್ರಾಯ ಭಟ್ ನೀರ್ಕಜೆ, ಜಲದುರ್ಗ ದೇವಿ ದೇವಸ್ಥಾನ, ಪೆರುವಾಜೆ, ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ, ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಅನುರಾಜ್, ಇವರುಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸ್ಪರ್ಧಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ ಕಾಂತಮಂಗಲ ಇವರು ಆಗಮಿಸಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕೊಡುವ ಇಂತಹ ಕಾಮರ್ಸ್ ಫೆಸ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನೊರ್ವ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪೆರುವಾಜೆ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲಾರದ ಡಾ. ಬಾಲಸುಬ್ರಮಣ್ಯ ಪಿ. ಎಸ್. ಇವರು ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರಾಮಚಂದ್ರ ಕೆ., ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀಮತಿ ಪ್ರತಿಮಾ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಪೊನ್ನಪ್ಪ ಎ. ಎಮ್., ವಾಣಿಜ್ಯ ಸಂಘದ ವಿದ್ಯಾರ್ಥಿ ಪದಾಧಿಕಾರಿಗಳಾದ ತೇಜಸ್ವಿತ್, ವಿದ್ಯಾಶ್ರೀ ಡಿ., ನಿತಿನ್ ಬಿ. ಎಸ್., ಫೆಸ್ಟ್ ಸಂಯೋಜಕರಾದ ಚಿತ್ರೆಶ್ ಹಾಗೂ ನಿರೀಕ್ಷಾ ಕೆ ಉಪಸ್ಥಿತರಿದ್ದರು. ಈ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಒಟ್ಟು ಇಪ್ಪತ್ತು ತಂಡಗಳು ಆಗಮಿಸಿದ್ದು, ಎಕ್ಸಲೆಂನ್ಸಿಯ- 2026 ರ ಸಮಗ್ರ ಪ್ರಶಸ್ತಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜು ಪಡೆದುಕೊಂಡಿದ್ದು ಎರಡನೇ ಬಹುಮಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು,ಸುಳ್ಯ ಗಳಿಸಿತು.







