ಜಾಲ್ಸೂರು : ಮಹಿಳಾ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಜಾಲ್ಸೂರು ಹಾಗೂ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಹಿಳಾ ದಿನಾಚರಣೆ” ಅಂಗವಾಗಿ ಮಹಿಳಾ ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಸುಲಭ ಸವಿಸುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಭವನ ಜಾಲ್ಸೂರಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೈಲಜಾ.ಎ ಅವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಸುಬ್ರಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕುಸುಮ ವಹಿಸಿದ್ದರು.
ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ರಚನಾ ಕೆ. ಮಹಿಳಾ ಆರೋಗ್ಯದ ಬಗ್ಗೆ ಜಾಗೃತಿ ಕುರಿತು ಸ್ಥೂಲ ಮಾಹಿತಿಯನ್ನು ತಿಳಿಸಿಕೊಟ್ಟರು. ಇದೇ ಸಂದರ್ಭ ಸಂಘಟಕಿ ವೇದಾ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳೆಯರಿಗೆ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

ಶ್ರೀಮತಿ ಸೌಮ್ಯ ಪ್ರಾರ್ಥಿಸಿದರು. ಸ್ನಾತಕೋತ್ತರ ಸಮಾಜ ಕಾರ್ಯದ ವಿದ್ಯಾರ್ಥಿ ಶಿವರಾಜ್ ಬಿ.ಕೆ ಸ್ವಾಗತಿಸಿದರು. ದೀಕ್ಷಾ.ಪಿ.ಎಲ್ ರವರು ವಂದಿಸಿದರು. ದಿವ್ಯ.ಬಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು.