ಕೆ ವಿ ಜಿ ಕಾನೂನು ಕಾಲೇಜಿನಲ್ಲಿ ಡಾ. ಬಾಬು ಜಗಜೀವನ ರಾಂರವರ 119 ನೇ ಜಯಂತಿ ಆಚರಣೆ

0


ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಭಾರತದ ಮಾಜಿ ಉಪಪ್ರಧಾನ ಮಂತ್ರಿ, ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂರವರ 119 ನೇ ಜಯಂತಿಯನ್ನು ಕಾಲೇಜಿನ ಸಭಾಂಗಣದಲ್ಲಿ, ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಟೀನಾ ಹೆಚ್ ಎಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.