













ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ 4 ರಿಂದ 11 ರ ತನಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯ ಸಭಾಭವನದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರವು ನಡೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮೇ. 4 ರಂದು ನಡೆಯಿತು.
ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಅಧ್ಯಕ್ಷ ಸೋಮಶೇಖರ ಪೈಕ ದೀಪ ಪ್ರಜ್ವಲನೆಗೊಳಿಸಿ ಶುಭ ಹಾರೈಸಿದರು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ನಿರ್ದೇಶಕ ಜಯಪ್ರಕಾಶ್ ಕಲ್ಲಪ್ಪಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯೋಜನಾಧಿಕಾರಿ ಮಾಧವ ಗೌಡ, ಭಜನಾ ಪರಿಷತ್ನ ಗೌರವಾಧ್ಯಕ್ಷ ಯತೀಶ್ ರೈ ದುಗಲಡ್ಕ, ಕಾರ್ಯದರ್ಶಿ ಟಿ.ಎನ್.ಸತೀಶ್, ಸುಳ್ಯ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಮನೋಹರ್ ಕೆ., ಉದ್ಯಮಿ ನಾರಾಯಣ ಕೇಕಡ್ಕ, ಶ್ರೀಮತಿ ಶಶಿಕಲಾ ಹರಪ್ರಸಾದ್, ಶ್ರೀಮತಿ ಭಾರತಿ ಅರಂತೋಡು, ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ಭಜನಾ ಕೈಪಿಡಿಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ವಲಯ ಮೇಲ್ವಿಚಾರಕ ದಿನೇಶ್ ಸ್ವಾಗತಿಸಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಸುಳ್ಯ ವಲಯದ ಅಧ್ಯಕ್ಷೆ ಶ್ರೀಮತಿ ಸವಿತಾ ಸಂದೇಶ್ ವಂದಿಸಿದರು. ಸೇವಾ ಪ್ರತಿನಿಧಿ ಸುರೇಶ್ ಪರಿವಾರಕಾನ ಕಾರ್ಯಕ್ರಮ ನಿರೂಪಿಸಿದರು. ಮೇ. 11 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಬೆಳಗ್ಗೆ ಮಕ್ಕಳಿಂದ ಮಾತ ಪಿತರ ಪಾದ ಪೂಜನಾ ಕಾರ್ಯಕ್ರಮ ನಡೆಯಲಿದೆ.







