













ಇಂದು ಸಂಜೆ ಚೊಕ್ಕಾಡಿ ಭಾಗದಲ್ಲಿ ಬೀಸಿದ ಗಾಳಿ ಮಳೆಗೆ ರಸ್ತೆ ಬದಿಯ ಮರಗಳು ವಿದ್ಯುತ್ ಲೈನಿನ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದೆ. ಚೊಕ್ಕಾಡಿ ಕಟ್ಟೆಯಿಂದ ಮುಂದಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದು, ತಂತಿಗಳು ರಸ್ತೆಯಲ್ಲಿ ಹರಡಿಕೊಂಡಿದೆ. ಮರಗಳು, ಗೆಲ್ಲುಗಳು ರಸ್ತೆಗೆ ಬಿದ್ದಿದೆ. ಸ್ಥಳೀಯರು ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.







