ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯ, ಆಸ್ಪತ್ರೆಗೆ ದಾಖಲು














ಮೊಗರ್ಪಣೆ ಸೇತುವೆ ಸಮೀಪ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿ ಸುಳ್ಯ ಆಸ್ಪತ್ರೆಗೆ ದಾಖಲಾದ ಘಟನೆ ಮೇ 8ರಂದು ಸಂಜೆ ನಡೆದಿದೆ.
ಬೆಂಗಳೂರು ಮೂಲದ ಕಾರು ಕಾಸರಗೋಡು ಕುಂಬ್ಳೆ ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದು ಮೊಗರ್ಪಣೆ ಸೇತುವೆ ಸಮೀಪ ಅದರ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.ಘಟನೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯ ಉಂಟಾಗಿ,ಸ್ಥಳೀಯರು ಕೂಡಲೇ ಬೈಕ್ ಸವಾರನನ್ನು ಆಟೋರಿಕ್ಷಾದಲ್ಲಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.ಘಟನೆಯಿಂದ ಕಾರಿನ ಹಿಂಭಾಗದ ಬಂಪರ್ ಮುರಿದುಬಿದ್ದು ಕಾರಿನ ಹಿಂಭಾಗ ಜಖಂ ಗೊಂಡಿದೆ.







