ಕನಕಮಜಲು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

0

ಮಹಿಳೆಯರು ಸೇರಿದಂತೆ ನಾಲ್ವರು ಪ್ರಯಾಣಿಕರಿಗೆ ಗಾಯ, ಸುಳ್ಯ ಆಸ್ಪತ್ರೆಗೆ ದಾಖಲು

ಕನಕಮಜಲು ಸಮೀಪ ಐ20 ಕಾರು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೇ 8 ರಂದು ಸಂಜೆ ನಡೆದಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದು,ಘಟನೆಯಿಂದ ಕಾರಿನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ನಾಲ್ವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರು ತಮ್ಮ ಕಾರಿನಲ್ಲಿ ಸುಳ್ಯ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಕಾರಿನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯುವಲ್ಲಿ ಸ್ಥಳೀಯರಾದ ಶಾಹುಲ್ ಮತ್ತು ಅಕೀಮ್ ರವರು ಸಹಕರಿಸಿದ್ದಾರೆ ಎಂದು ತಿಳಿದುಬಂದಿದೆ.