














ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಾಮರ್ಥ್ಯ ಉಪಯೋಜನೆಯ ಪಾಲನಾ ಉಪಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಳ್ಯ ತಾಲೂಕಿನ ಗಾಂಧಿನಗರ, ಜಟ್ಟಿಪಳ್ಳ ಹಾಗೂ ಸುಬ್ರಹ್ಮಣ್ಯ ಅಂಗನವಾಡಿ ಕಂ-ಕ್ರಷ್ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಂ-ಕ್ರಷ್ ಸಹಾಯಕಿ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ. 55೦೦/- ಹಾಗೂ ಸಹಾಯಕಿಯರ ಮಾಸಿಕ ಗೌರವಧನ ರೂ.3೦೦೦/- ಆಗಿರುತ್ತದೆ. ದಿನಾಂಕ:೩೦.೦೫.೨೦೨೬ರ ತನಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಸೂಕ್ತ ದಾಖಲೆಗಳೊಂದಿಗೆ ಅದೇ ಅಂಗನವಾಡಿ ಸರ್ವೆ ವ್ಯಾಪ್ತಿಯ ೧೮ ರಿಂದ ೩೫ ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು.
ಅಂಗನವಾಡಿ ಕಂ-ಕ್ರಷ್ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ೧೦ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುವುದು.
ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದಲ್ಲಿ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಕಂ-ಕ್ರಷ್ ಸಹಾಯಕಿ ಹುದ್ದೆಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ೧೦ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದಲ್ಲಿ ೭ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುವುದು. ಹೆಚ್ಚಿನ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಛೇರಿ ಸುಳ್ಯ: 08257-298139 ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.






