ಲಾರಿಯ ಮುಂಭಾಗ ಜಖಂ, ಚಾಲಕ ಅಪಾಯದಿಂದ ಪಾರು














ಮಂಗಳೂರಿನಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆ ಸಾಗುತ್ತಿದ್ದ ಕಂಟೈನರ್ ಲಾರಿಯೊಂದು ಹಳೆಗೇಟು ಪೆಟ್ರೋಲ್ ಬಂಕ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ ಘಟನೆ ಮೇ 15 ರಂದು ರಾತ್ರಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿಯು ರಸ್ತೆಯ ಎಡಭಾಗದಲ್ಲಿದ್ದ ಸಣ್ಣ ಬರೆಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ಜಖಂಗೊಂಡು ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.







