ಮೇ.18 ರಂದು ಸುಳ್ಯದಲ್ಲಿ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಶೈಕ್ಷಣಿಕ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ

0

ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿ ಭವಿಷ್ಯಕ್ಕೆ ಮಾರ್ಗದರ್ಶನ ನೀಡುವ ಉದ್ದೇಶದಿಂದ “What’s Next After SSLC & PUC ?” ಎಂಬ ಶೈಕ್ಷಣಿಕ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಮಾಹಿತಿ ಕೇಂದ್ರದ ವತಿಯಿಂದ ಮೇ 18 ರಂದು ಸುಳ್ಯದಲ್ಲಿ ಆಯೋಜಿಸಲಾಗಿದೆ.
ಸುಳ್ಯ ತಾ.ಪಂ. ಸಭಾಂಗಣದಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಕ್ರಮದಲ್ಲಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಲಭ್ಯವಾಗುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಜೊತೆಗೆ SSLC ಹಾಗೂ PUC ಬಳಿಕದ ಮುಂದಿನ ವಿದ್ಯಾಭ್ಯಾಸ, ಕೋರ್ಸ್ ಆಯ್ಕೆ ಮತ್ತು ಉದ್ಯೋಗಾವಕಾಶಗಳ ಕುರಿತು ಪುತ್ತೂರಿನ ಕಮ್ಯುನಿಟಿ ಸೆಂಟರ್ ವತಿಯಿಂದ ಸಮಗ್ರ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಮಾಹಿತಿ ಕೇಂದ್ರದ ನಿರ್ವಾಹಕರಾದ ಕಮಾಲ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಈ ವರ್ಷದ SSLC ಹಾಗೂ PUC ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಹಾಗೆಯೇ PUC ಪರೀಕ್ಷೆಯಲ್ಲಿ ರಾಜ್ಯಕ್ಕೇ ದ್ವಿತೀಯ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಗೆ ವಿಶೇಷ ಗೌರವ ಪ್ರದಾನ ನಡೆಯಲಿದೆ.
ಈ ಕಾರ್ಯಕ್ರಮವು ಸುಳ್ಯ ತಾಲೂಕು ಮುಸ್ಲಿಂ ಯೂತ್ ಫೆಡರೇಷನ್ ಹಾಗೂ ಕೆ.ಎ.ನಾಲೆಜ್ ಸೆಂಟರ್ ಸಹಯೋಗದಲ್ಲಿ ನಡೆಯುತ್ತಿದೆ.

ಕಾರ್ಯಕ್ರಮದ ವಿಶೇಷತೆಗಳು
ಕೆರಿಯರ್ ಗೈಡೆನ್ಸ್ , ಕೌನ್ಸಿಲಿಂಗ್ ಮತ್ತು ಮೆಂಟರ್ ಶಿಪ್,
ಮುಂದಿನ ವಿದ್ಯಾಭ್ಯಾಸದ ಮಾಹಿತಿ,
ವಿದ್ಯಾರ್ಥಿಗಳಿಗೆ ವಿಶೇಷ ಪ್ರಯೋಜನಗಳ ಮಾಹಿತಿ.

ಹೆಚ್ಚಿನ ಮಾಹಿತಿಗಾಗಿ 8152012123 ಅಥವಾ 9845754285 ಸಂಖ್ಯೆಯನ್ನು ಸಂಪರ್ಕಿಸಬಹುದು.
ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಮಾಲ್ ಮನವಿ ಮಾಡಿಕೊಂಡಿದ್ದಾರೆ.