ಪೈಚಾರು :ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ

0

ಮಹಿಳೆ ಸೇರಿದಂತೆ ಮೂವರಿಗೆ ಗಾಯ,ಆಸ್ಪತ್ರೆಗೆ ದಾಖಲು

ಸುಳ್ಯದ ಪೈಚಾರು ಬಳಿ ಬೊಳುಬೈಲಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಜೂನ್ ೨ ರಂದು ನಡೆದಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದು, ಘಟನೆಯಿಂದ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಪುತ್ತೂರಿನಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಇದಾಗಿದ್ದು ಗಾಯಗೊಂಡವರು ಸುಳ್ಯ ನಿವಾಸಿಗಳು ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.