ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ದುಷ್ಪರಿಣಾಮದ ಬಗ್ಗೆ ಉಪನ್ಯಾಸ ಕಾರ್ಯಕ್ರಮ

0

ಶ್ರೀ ಶಾರದಾ ಪ್ರೌಢಶಾಲೆ ದ.ಕ. ಗೌಡ ವಿದ್ಯಾಸಂಘ ಸುಳ್ಯ ಇಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ದುಷ್ಪರಿಣಾಮ ಇದರ ವಿಚಾರವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಡಾ.ವಿನ್ಯಾಸ್ ಹೊಸೊಳಿಕೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ. ಅಧ್ಯಕ್ಷತೆ ವಹಿಸಿ ಮಾದಕ ವಸ್ತುಗಳ ಚಟಕ್ಕೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ ಎ.ಎಸ್. ಉಪಸ್ಥಿತರಿದ್ದರು. ಇಂಗ್ಲೀಷ್ ಭಾಷಾ ಶಿಕ್ಷಕರಾದ ಶ್ರೀಮತಿ ಅರ್ಪಣಾ ಜಿ.ಕೆ ಕಾರ್ಯಕ್ರಮ ನಿರೂಪಿಸಿದರು. ಹಿಂದಿ ಭಾಷಾ ಶಿಕ್ಷಕಿ ಶ್ರೀಮತಿ ಸೌಮ್ಯ ವಂದಿಸಿದರು. ಶಿಕ್ಷಕ ವೃಂದದವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.