













ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಯವರು ವಿದ್ಯಾರ್ಥಿಗಳಿಗೆ ದಿನಾ ಯೋಗ ಮಾಡುವುದರ ಬಗ್ಗೆ ಮತ್ತು ಅದರಿಂದಾಗುವ ಪರಿಣಾಮಗಳನ್ನು ತಿಳಿಸಿದರು. ಕನ್ನಡ ಭಾಷಾ ಶಿಕ್ಷಕರಾದ ಶ್ರೀಮತಿ ಭವ್ಯ ಪಿ ಇವರು ಯೋಗದ ಆರಂಭ ಮತ್ತು ನಮ್ಮ ದೇಶದಲ್ಲಿ ಯೋಗ ಹೇಗೆ ಎಲ್ಲಿ ಬೆಳಕಿಗೆ ಬಂತು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ಎಸ್ ವಿದ್ಯಾರ್ಥಿಗಳಿಗೆ ಯೋಗವನ್ನು ಮಾಡಿಸಿದರು.

ಪ್ರೌಢಶಾಲೆಯ ಎಲ್ಲಾ ಶಿಕ್ಷಕರು , ವಿದ್ಯಾರ್ಥಿಗಳು ಯೋಗದಲ್ಲಿ ಭಾಗವಹಿಸಿದರು.








