ಪ್ರಯಾಣಿಕನಿಗೆ ಗಾಯ, ಆಸ್ಪತ್ರೆಗೆ ದಾಖಲು
ಪೈಚಾರು :ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಗ್ನಿಸ್ ಕಾರಿಗೆ ಹಿಂಬದಿಯಿಂದ ಬಂದ ಟಾಟಾ ಟಿಯಾಗೋ ಕಾರು ಡಿಕ್ಕಿ ಹೊಡೆದ ಪರಿಣಾಮ ಟಿಯಾಗೋ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಜೂ 22 ರಂದು ನಡೆದಿದೆ.














ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಟಾಟಾ ಟಿಯಾಗೋ ಕಾರು ಪೈಚಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಇಗ್ನಿಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟಾಟಾ ಟಿಯಾಗೋ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಅಪಘಾತದ ತೀವ್ರತೆಗೆ ಇಗ್ನಿಸ್ ಕಾರಿನ ಹಿಂಬದಿಯ ಬಲ ಭಾಗದ ಚಕ್ರಕ್ಕೆ ಹಾನಿ ಯಾಗಿದ್ದು ಮ್ಯಾಗ್ ವೀಲ್ ಕಟ್ ಆಗಿದೆ.







