ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ

0

ಜೂ.30ರಂದು ಅರಂತೋಡಿನಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ, ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಆರಂತೋಡು, ಗ್ರಾಮ ಗೌಡ ಸಮಿತಿ, ಮಹಿಳಾ ಸಮಿತಿ ಆರಂತೋಡು ಗ್ರಾಮಗಳ ಜಂಟಿ ಆಶ್ರಯದಲ್ಲಿ ಜೂ.30 ಮಂಗಳವಾರದಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜನ್ಮದಿನಾಚರಣೆಯನ್ನು ಏರ್ಪಡಿಸಲಾಗಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಸುಳ್ಯ ವಿಧಾನಸಭಾಕ್ಷೇತ್ರದ ಮಾನ್ಯ ಶಾಸಕರಾದ ಕು| ಭಾಗೀರಥಿ ಮುರುಳ್ಳರವರು ದಿನಾಚರಣೆಯ ಅಧ್ಯಕ್ಷತೆ ವಹಿಸಿ ಉದ್ಘಾಟನೆ ಮಾಡಲಿದ್ದು, ಕೆಂಪೇಗೌಡ ಪ್ರಶಸ್ತಿಯನ್ನು ನಿವೃತ್ತ ಸುಳ್ಯ ಕ್ಷೇತ್ರಾಭಿವೃದ್ಧಿ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪುನಃಚೇತನ ರೂವಾರಿ ಶ್ರೀಮತಿ ಎಂ. ಮೀನಾಕ್ಷಿ ಗೌಡರವರಿಗೆ ನೀಡಿ ಗೌರವಿಸಲಾಗುವುದು.

ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ. ಎಂ. ಶಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ದ. ಕ. ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಭರತ್ ಮುಂಡೋಡಿ, ಸುಳ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಎಂ. ಮುಸ್ತಾಫ, ಸುಳ್ಯ ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಹುಲ್ ಹಮೀದ್‌ರವರುಗಳು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ರಾಜ್ಯ ಒಕ್ಕಲಿಗರ ಸಂಘ (ರಿ.) ಬೆಂಗಳೂರು ಇದರ ಉಪಾಧ್ಯಕ್ಷರಾದ ಡಾ| ರೇಣುಕಾಪ್ರಸಾದ್ ಕೆ. ವಿ. ಆರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸಂಚಾಲಕ ಎ. ಸಿ. ವಸಂತ, ಸುಳ್ಯ ಗೌಡರ ಯುವ ಸೇವಾ ಸಂಘ (ರಿ.) ಇದರ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಉಪಸ್ಥಿತರಿರುತ್ತಾರೆ. ನಿವೃತ್ತ ಶಿಕ್ಷಕಿ ಶ್ರೀಮತಿ ಚಂದ್ರಮತಿ ಕೆ.ರವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.