ಕಾರಿನಲ್ಲಿದ್ದ ಮಹಿಳೆಗೆ ಗಾಯ- ಆಸ್ಪತ್ರೆಗೆ ದಾಖಲು














ಗಾಂಧಿನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಘಟನೆಯಿಂದ ಕಾರಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜುಲೈ 3ರಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಇಂದು ನೂತನವಾಗಿ ಖರೀದಿಸಿದ್ದ ಕಾರು ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದು ಕಾರು ಗಾಂಧಿನಗರದತ್ತ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿದೆ. ಕಾರಿನಲ್ಲಿ ಪತಿ ಮತ್ತು ಪತ್ನಿ ಇದ್ದು
ಪತ್ನಿಗೆ ಗಾಯವಾಗಿ ಸ್ಥಳೀಯರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ.
ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.







