














ಸುಳ್ಯ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗ , ಬಿಗ್ ಫೋರ್ ಟೈಲ್ಸ್ ಮಳಿಗೆಯ ಮುಂಭಾಗದಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ಕೆಳಭಾಗದಲ್ಲಿ ಯಾರೋ ದುಷ್ಕರ್ಮಿಗಳು ತುಂಡು ತುಂಡಾದ ಮದ್ಯದ ಬಾಟಲಿಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ ತಂದು ಹಾಕಿದ್ದಾರೆ.
ವಿದ್ಯುತ್ ಸಮಸ್ಯೆಯನ್ನು ದುರಸ್ತಿಗೊಳಿಸಲು ಮೆಸ್ಕಾಂ ಸಿಬ್ಬಂದಿಗಳು ಬಂದಾಗ ಅವರಿಗೆ ಒಳ ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ದುಷ್ಕೃತ್ಯ ಎಸೆಗಿದವರನ್ನು ಪತ್ತೆಹಚ್ಚ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.







