














ಜಯನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ
ಡಾ| ಗಿರೀಶ್ ಭಾರಧ್ವಜ್ ರವರಿಗೆ ಶ್ರದ್ಧಾಂಜಲಿ ನುಡಿನಮನ ನಡೆಯಿತು.
ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಬಾಲಕೃಷ್ಣ ಭಟ್ ಕೋಡಂಕೇರಿಯವರು ನುಡಿನಮನ ಸಲ್ಲಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಮುದ್ದಪ್ಪ,
ಶಾಲಾ ಮುಖ್ಯ ಶಿಕ್ಷಕಿ ಕೆ ವೀಣಾ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







