













ಶಕ್ತಿ ಅಸ್ತ್ರ ಮೀಡಿಯಾ ಕ್ರಿಯೇಶನ್ಸ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ರವೀಂದ್ರ ಕಲಾ ಕ್ಷೇತ್ರ ,ನಯನ ಕಲಾ ಮಂದಿರ ಬೆಂಗಳೂರು ಇಲ್ಲಿ ಜು.16 ರಂದು ನಡೆದ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ರಾಜ್ಯ ಕಾರ್ಯದರ್ಶಿ, ಮೂಲತಃ ಬಳ್ಪದದವರಾಗಿದ್ದು ಬೆಂಗಳೂರು ನಿವಾಸಿ ಪದ್ಮನಾಭ ಜತ್ತಿಲ ಅವರಿಗೆ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.







