














ಬಾಳಿಲ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆ.15 ರಂದು ಆಚರಿಸಲಾಯಿತು. ಪಂ.ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಓಲ್ಗಾ ಡಿಸೋಜಾ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಬಾಳಿಲ ಗ್ರಾಮ ಪಂಚಾಯತ್ ನ ಮಾಜಿ ಚುನಾಯಿತ ಜನಪ್ರತಿನಿಧಿಗಳು ಮಾಜಿ ತಾಲೂಕು ಪಂಚಾಯತ್ ಸದಸ್ಯರು , ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಶೌರ್ಯ ವಿಪತ್ತು ತಂಡದ ಸದ್ಯಸರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾ.ಪಂ ವ್ಯಾಪ್ತಿಯ ವಿವಿಧ ಸಂಘಟನೆಯ ಸದಸ್ಯರುಗಳು, ಪಂಚಾಯತ್ ಕಾರ್ಯದರ್ಶಿ , ಸಿಬ್ಬಂದಿಗಳು ಭಾಗವಹಿಸಿದ್ದರು.







