ಮೊಗರ್ಪಣೆ ಮಸೀದಿಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯೋತ್ಸವ

0

ಮೊಗರ್ಪಣೆ ಮಸೀದಿಯಲ್ಲಿ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ ನೂರುಲ್ ಇಸ್ಲಾಂ ಹೈಯರ್ ಸೆಕಂಡರಿ ಮದ್ರಸಾ ವತಿಯಿಂದ 80 ನೇ ವರ್ಷದ ಸ್ವಾತಂತ್ರೋತ್ಸವವನ್ನು ಆ.15 ರಂದು ಆಚರಿಸಲಾಯಿತು.

ಜಮಾಅತ್ ಕಮಿಟಿಯ ಅಧ್ಯಕ್ಷರಾದ ಸಿ ಎಂ ಉಸ್ಮಾನ್ ರವರು ಧ್ವಜಾರೋಹಣ ನೆರವೇರಿಸಿದರು. ಮುದರ್ರಿಸ್ ಅಬ್ದುಲ್ ಖಾದರ್ ಸಕಾಫಿ ಅಲ್ ಖಾಮಿಲ್ ಮುದುಗಡ ಇವರು ಸಂದೇಶ ಭಾಷಣವನ್ನು ನೀಡಿದರು.

ಮದರಸ ಸದರ್ ಮುಅಲ್ಲಿಂ ಅಬ್ದುಲ್ ಕರೀಂ ಸಕಾಫಿ ರವರು ಪ್ರಾಸ್ತಾವಿಕ ಮಾತನಾಡಿ ಸರ್ವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ಸಂಶುದ್ದೀನ್ ಅರಂಬೂರು, ಜಮಾಅತ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಕೋಶಾಧಿಕಾರಿ ಮಹಮ್ಮದ್ ಆದರ್ಶ, ಹಾಗೂ ಜಮಾಅತ್ ಕಮಿಟಿಯ ಸದಸ್ಯರುಗಳು, ಮದರಸ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.