














ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಆ.15 ರಂದು 80 ನೇವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರು ನೆರವೇರಿಸಿ ಸಂದೇಶ ನುಡಿಗಳನ್ನಾಡಿದರು. ರಾಷ್ಟ್ರಧ್ವಜಕ್ಕೆ ಗೌರವ ನಮನ ಸಲ್ಲಿಕೆ ನಡೆಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು.
ಈ ಸಂದರ್ಭದಲ್ಲಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ, ಪ್ರೊಬೆಷನರಿ ಎಸ್ ಐ ಕೃಷ್ಣಯ್ಯ ಹಾಗೂ ಎ ಎಸ್ ಐ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.







