













ಸುಳ್ಯದ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಲ್ನಾಡ್ ಶಾಲೆಯ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಹಾಗೂ ಜನಾರ್ಧನ್ ಕೊಳಿಂಜಿರೋಡಿಬನಿವೃತ್ತ ಬ್ಯಾಂಕ್ ಉದ್ಯೋಗಿ ಅನಿಸಿಕೆಗಳನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಜಯಪ್ರಕಾಶ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







